Tuesday, July 1, 2025
spot_imgspot_img
spot_imgspot_img

ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರು ಅರೆಸ್ಟ್‌..!

- Advertisement -
- Advertisement -

ಅಹಮದಾಬಾದ್: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಇಡೀ ದೇಶಾದ್ಯಂತ ನೆಲೆಸಿರುವ ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುವ ಕಾರ್ಯಾಚರಣೆಯನ್ನು ಸರ್ಕಾರಗಳು ಆರಂಭಿಸಿದೆ. ಈ ನಡುವೆ ವಿವಿಧ ದೇಶಗಳಿಂದ ಬಂದು ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆಹಚ್ಚುವ ಕೆಲಸಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ.

ಅದರಂತೆ ಅಹಮದಾಬಾದ್ ಮತ್ತು ಸೂರತ್‌ನಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ. ಇದು ಗುಜರಾತ್ ಪೊಲೀಸರು ಇಲ್ಲಿಯವರೆಗೆ ನಡೆಸಿದ ಅತಿದೊಡ್ಡ ಕಾರ್ಯಾಚರಣೆಯಾಗಿದ್ದು, ಬಂಧಿತರನ್ನ ಶೀಘ್ರವೇ ಗಡಿಪಾರು ಮಾಡುವ ಪ್ರಕ್ರಿಯೆ ಚುರುಕುಗೊಂಡಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘ್ವಿ ಮಾಹಿತಿ ನೀಡಿದ್ದಾರೆ.

ಅಹಮದಾಬಾದ್‌ನಲ್ಲಿ ಕನಿಷ್ಠ 890 ಮತ್ತು ಸೂರತ್‌ನಲ್ಲಿ 134 ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ. ಬಂಧಿತರು ಗುಜರಾತ್‌ಗೆ ಬರುವ ಮುನ್ನ ಭಾರತದ ವಿವಿಧ ಭಾಗಗಳಲ್ಲಿ ಉಳಿಯಲು ಪಶ್ಚಿಮ ಬಂಗಾಳದಿಂದ ಪಡೆದ ನಕಲಿ ದಾಖಲೆಗಳನ್ನು ಬಳಸಿಕೊಂಡಿದ್ದಾರೆ. ಗುಜರಾತ್‌ನಲ್ಲಿ ವಾಸಿಸುವ ಅಕ್ರಮ ವಲಸಿಗರು ಸ್ವಯಂಪ್ರೇರಿತವಾಗಿ ಪೊಲೀಸರ ಮುಂದೆ ಶರಣಾಗಬೇಕು, ಇಲ್ಲದಿದ್ದರೆ ಅವರನ್ನು ಬಂಧಿಸಿ ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!