Monday, June 22, 2026
spot_imgspot_img
spot_imgspot_img

ಫ್ಲ್ಯಾಟ್ ಖರೀದಿದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಫ್ಲ್ಯಾಟ್ ಖರೀದಿಯನ್ನು ಪ್ರೋತ್ಸಾಹಿಸಿ ರಿಯಲ್ ಎಸ್ಟೇಟ್ ಉದ್ಯಮ ಚೇತರಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಸ್ಟ್ಯಾಂಪ್ ಡ್ಯೂಟಿಯನ್ನು ಗಣನೀಯವಾಗಿ ಇಳಿಸಿದೆ.

25 ಲಕ್ಷ ರೂ.ವರೆಗಿನ ಫ್ಲ್ಯಾಟ್ ಖರೀದಿಸುವವರಿಗೆ ಈವರೆಗೆ ಇದ್ದ ಶೇ.6ರ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.2ಕ್ಕೆ ಇಳಿಸಲಾಗಿದೆ. 25 ಲಕ್ಷ ರೂ.ಗಳಿಂದ 35 ಲಕ್ಷ ರೂ.ಗಳವರೆಗಿನ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.3ಕ್ಕೆ ಇಳಿಸಲಾಗಿದೆ.

ಕರ್ನಾಟಕ ಸ್ಟ್ಯಾಂಪ್ ಆ್ಯಕ್ಟ್ ಗೆ ತಿದ್ದುಪಡಿ ತರುವ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಕೊಳ್ಳುವುದಕ್ಕೆ ಇರುವ ಸ್ಟ್ಯಾಂಪ್ ಡ್ಯೂಟಿಯನ್ನು ಗಣನೀಯವಾಗಿ ಇಳಿಸಿದೆ. ಈ ಕುರಿತು ಗುರುವಾರ ರಾಜ್ಯಪತ್ರ ಪ್ರಕಟವಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಖರೀದಿಯಲ್ಲಿ ಲಕ್ಷಾಂತರ ರೂ. ಉಳಿತಾಯವಾಗಲಿದೆ.

- Advertisement -

Related news

error: Content is protected !!