Friday, June 27, 2025
spot_imgspot_img
spot_imgspot_img

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಕೆಶಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ

- Advertisement -
- Advertisement -

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿದೆ.


ಅಕ್ಟೋಬರ್ 5ರಂದು ಸಿಬಿಐ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಸಿಬಿಐ ದಾಳಿಯ ಬಳಿಕ ಇದೇ ಮೊದಲ ಬಾರಿಗೆ ಸಿಬಿಐ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.


ನವೆಂಬರ್ 23 ರಂದು ದೆಹಲಿಯ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿರುವ ಸಿಬಿಐ ಅಧಿಕಾರಿಗಳು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಶಾಕ್ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಬಿಐ ನಿಂದ ವಿಚಾರಣೆಗೆ ಹಾಜರಾಗುವಂತೆ ಕರೆದಿದೆ. ನವೆಂಬರ್ 23ಕ್ಕೆ ವಿಚಾರಣೆಗೆ ಬರುವಂತೆ ಸೂಚಿಸಿದೆ. ತಾವು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!