- Advertisement -
- Advertisement -





ಬೆಂಗಳೂರು: ಹಾವೇರಿಯಲ್ಲಿ ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ಕಂ ಕಂಡಕ್ಟರ್ ನಮಾಜ್ ಮಾಡಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಪತ್ರ ಬರೆದ ರಾಮಲಿಂಗಾ ರೆಡ್ಡಿ, ಸೂಕ್ತ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಇದನ್ನು ನೋಡಿದ ಬಸ್ಸಿನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ಪ್ರಯಾಣಿಕರೊಬ್ಬರು ಇದರ ವೀಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಕರ್ತವ್ಯದ ಅವಧಿಯಲ್ಲಿಯೇ ನಮಾಜ್ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.
- Advertisement -








