- Advertisement -
- Advertisement -
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಕೇಸ್ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.
ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು ಎಂದು ಗುರುತಿಸಲಾಗಿದ್ದು, ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್‌ಗೆ ಕೆಲಸ ಮಾಡಲು ಸಾಥ್ ನೀಡುತ್ತಿದ್ದರು. ಸದ್ಯ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಮಂಗಳೂರು ಪೊಲೀಸರು ಎಂಟು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಆ ಪೈಕಿ ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ.
- Advertisement -