Saturday, June 28, 2025
spot_imgspot_img
spot_imgspot_img

ಕಾರ್ಕಳ: ಬಸ್-ಕಾರು ನಡುವೆ ಮುಖಾಮುಖಿ ಡಿಕ್ಕಿ; ಕಾರು ಚಾಲಕನಿಗೆ ಗಾಯ..!

- Advertisement -
- Advertisement -

ಕಾರ್ಕಳ: ಸಾರಿಗೆ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ತೀವ್ರವಾಗಿ ಗಾಯಗೊಂಡ ಘಟನೆ ನೀರೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಕಾರ್ಕಳದಿಂದ ಉಡುಪಿಯತ್ತ ಸಾಗುತ್ತಿದ್ದ ಸ್ವಿಪ್ಟ್ ಕಾರು ಉಡುಪಿಯಿಂದ ಧರ್ಮಸ್ಥಳಕ್ಕೆ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್ ನಡುವೆ ಜಡ್ಡಿನಂಗಡಿ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಅಪಘಾತವನ್ನು ತಪ್ಪಿಸಲು ಮುಂದಾದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

- Advertisement -

Related news

error: Content is protected !!