Thursday, August 6, 2026
spot_imgspot_img
spot_imgspot_img

ಹಾವೇರಿಯಲ್ಲಿ ಭೀಕರ ಅಪಘಾತ: 6 ಜನರು ಸ್ಥಳದಲ್ಲೇ ಸಾವು

- Advertisement -
- Advertisement -

ಹಾವೇರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿ 6 ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾದ ದಾರುಣ ಘಟನೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ನಡೆದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಓರ್ವನಿಗೆ ಗಾಯವಾಗಿದೆ. ಗಾಯಾಳುಗಳನ್ನು ಕಾರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಹಾವೇರಿ ಎಸ್ ಪಿ ಅಂಶುಕುಮಾರ್ ಹೇಳಿಕೆ ನೀಡಿ, ಎನ್ ಹೆಚ್ 4 ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಲಾರಿಗೆ ಹಿಂದುಗಡೆಯಿಂದ ಹೋಗಿ ಕಾರ್ ಗುದ್ದಿದೆ. ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಆ ಮೇಲೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!