- Advertisement -
- Advertisement -






ರಾಯ್ಪುರ: ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಮೃತಪಟ್ಟ ಘಟನೆ ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ನಡೆದಿದೆ.
ಛತ್ತೀಸ್ಗಢದ ರಾಯ್ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ಚಟೌಡ್ ಗ್ರಾಮದ ಕುಟುಂಬವೊಂದು ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಪ್ರಯಾಣಿಸುತ್ತಿದ್ದ ಟ್ರಕ್ ಎದುರಿಗೆ ಬರುತ್ತಿದ್ದ ಟ್ರೇಲರ್ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಾಯುರ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
- Advertisement -