- Advertisement -
- Advertisement -
ಬೆಂಗಳೂರು: ಬೆಂಗಳೂರು ನಗರದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾ಼ಡಲಾಗಿದೆ. ಆಸ್ಪತ್ರೆಯ ವಿಶೇಷ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಎದೆ ನೋವು ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಹಿಂದೆ ಅನಾರೋಗ್ಯದ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್ ರಾಜ್ ಬಳಿಕ ಆಸ್ಪತ್ರೆಯಿಂದ ಪರಾರಿಯಾಗಿದ್ದರು.
ನ್ಯಾಯಾಲಯ ಅವರನ್ನು ನವೆಂಬರ್ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೇವಲ ಒಂದು ದಿನ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಕಳೆದ ಸಂಪತ್ ರಾಜ್ ಇದೀಗ ಅನಾರೋಗ್ಯದ ಕಾರಣ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ತಪ್ಪಿಸಿಕೊಳ್ಳದಿರಲು ಬಿಗಿ ಭದ್ರತೆ ಏರ್ಪಡಿಸಲಾಗಿದೆ.
- Advertisement -