Tuesday, August 4, 2026
spot_imgspot_img
spot_imgspot_img

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ

- Advertisement -
- Advertisement -

ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯಾನಂದ(55) ವಂಚನೆಗೊಳಗಾದ ವ್ಯಕ್ತಿ. ಜಯಾನಂದ ಎಂಬವರನ್ನು ಅಪರಿಚಿತರು ಮಾ.20ರಂದು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದರು. ಆ ಗ್ರೂಪಿನಲ್ಲಿ ಖಾತೆ ತೆರೆದು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಬಗ್ಗೆ ಸಂದೇಶ ಕಳುಹಿಸಲಾಗಿತ್ತು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು ಜಯಾನಂದರನ್ನು ನಂಬಿಸಲಾಗಿತ್ತು.ಅದರಂತೆ ಅವರು ಏ.1ರಿಂದ ಮೇ 13ರವರೆಗೆ ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 2,30,65,000ರೂ. ಹಣವನ್ನು ವರ್ಗಾಯಿಸಿದ್ದರು. ಆದರೆ ಈ ತನಕ ಜಯಾನಂದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಹಣವಾಗಲಿ ಅಥವಾ ಲಾಭಾಂಶವನ್ನು ನೀಡದೇ ಆರೋಪಿಗಳು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!