- Advertisement -
- Advertisement -







ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ& ರಾಜ್ಯ ವಿಪತ್ತು ನಿರ್ವಹಣಾ ತಂಡಗಳನ್ನು ಬಳಸಿಕೊಳ್ಳಲಾಗುವುದು. ಈಗಾಗಲೆ ರಾಜ್ಯ ವಿಪತ್ತು ನಿರ್ವಹಣಾ ತಂಡವು ಜಿಲ್ಲೆಗೆ ಆಗಮಿಸಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ತಿಳಿಸಿದ್ದಾರೆ.
ಸಭೆ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ವಿಪತ್ತು ದಳದ ಒಂದು ತಂಡ & ರಾಜ್ಯ ವಿಪತ್ತು ದಳದ ಎರಡು ತಂಡ ಆಗಮಿಸಿದೆ. ಈ ದಳಗಳು ಎಲ್ಲ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿದೆ. ಪ್ರಾಕೃತಿಕ ವಿಪತ್ತುಗಳ ಸಂದರ್ಭ ಕಾರ್ಯಾಚರಿಸಲಿದೆ ಎಂದರು.
- Advertisement -