Sunday, August 9, 2026
spot_imgspot_img
spot_imgspot_img

ಮಂಗಳೂರು: ಬಜ್ಪೆ ಚಲೋ ಪ್ರತಿಭಟನೆ: ಆಯೋಜಕರು, ಭಾಷಣಕಾರರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NlA)ಗೆ ವಹಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಸದಸ್ಯರು ನಡೆಸಿದ ‘ಬಜ್ಪೆ ಚಲೋ’ ಪ್ರತಿಭಟನೆಯ ಆಯೋಜಕರು ಮತ್ತು ಭಾಷಣಕಾರರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೇ 25 ರ ಭಾನುವಾರ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಬಜ್ಪೆಯ ಶಾರದಾ ಮಂಟಪದ ಬಳಿ ನಡೆದ ಪ್ರತಿಭಟನೆಯನ್ನು ಪೊಲೀಸರ ಅನುಮತಿಯಿಲ್ಲದೆ ನಡೆಸಲಾಗಿತ್ತು. ಸುಮಾರು 3,000 ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.ಪೊಲೀಸರ ಪ್ರಕಾರ, ಪ್ರತಿಭಟನಾಕಾರರು ಬಜ್ಪೆ ಬಸ್ ನಿಲ್ದಾಣ ಮತ್ತು ಸುತ್ತಮುತ್ತ ಕಾನೂನುಬಾಹಿರವಾಗಿ ಜಮಾಯಿಸಿ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ನಿರ್ಬಂಧಿಸಿ, ರಾಜ್ಯ ಹೆದ್ದಾರಿ ಸಂಖ್ಯೆ 67 ರ ಕೆಲವು ಭಾಗಗಳನ್ನು ಆಕ್ರಮಿಸಿಕೊಂಡರು. ಇದರಿಂದಾಗಿ ಆ ಪ್ರದೇಶದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಪ್ರವೇಶಕ್ಕೆ ಅಡ್ಡಿ ಉಂಟಾಯಿತು. ಅಲ್ಲದೇ ಕಾರ್ಯಕ್ರಮದ ಸಂದರ್ಭದಲ್ಲಿ, ಭಾಷಣಕಾರರಲ್ಲಿ ಒಬ್ಬರು ಸುಹಾಸ್ ಶೆಟ್ಟಿ ಪ್ರಕರಣವನ್ನು ಉಲ್ಲೇಖಿಸಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

Related news

error: Content is protected !!