Tuesday, August 4, 2026
spot_imgspot_img
spot_imgspot_img

ಸರಣಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್‌‌; 6 ಲಕ್ಷ ಮೌಲ್ಯದ ಚಿನ್ನ ವಶಕ್ಕೆ..!

- Advertisement -
- Advertisement -

ಹುಬ್ಬಳ್ಳಿ: ಟಾಯ್ಲೆಟ್ ಕಿಟಕಿ ಮುರಿದು 6 ಲಕ್ಷ ಮೌಲ್ಯದ 62 ಗ್ರಾಂ ಚಿನ್ನ ಕಳ್ಳತನ ಮಾಡಿದ್ದ ಖದೀಮನನ್ನು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಗರದ ದೊಡ್ಡಮನಿ ಕಾಲೋನಿಯ ಜಾಫರ್ ಬೇಪಾರಿ(24) ಎಂದು ಗುರುತಿಸಲಾಗಿದೆ.

ಆರೋಪಿ ಜಾಫರ್ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ, ಟಾಯ್ಲೆಟ್ ಕಿಟಕಿ ಮುರಿದು ಮನೆ ಕಳ್ಳತನ ಮಾಡುತ್ತಿದ್ದ. ಅದೇ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಬೆಂಡಿಗೇರಿ ಪೊಲೀಸರು ಆರೋಪಿ ಜಾಫರ್‌ನನ್ನು ಬಂಧಿಸಿ, ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ 1 ತಿಂಗಳ ಹಿಂದೆ ನಗರದಲ್ಲಿ ಮನೆಗಳಲ್ಲಿ ಸರಣಿ ಕಳ್ಳತನವಾಗಿತ್ತು. ಕೂಡಲೇ ಅಲರ್ಟ್ ಆದ ಇನ್ಸ್ಪೆಕ್ಟರ್ ಎಸ್.ಆರ್ ನಾಯಕ್ ನೇತೃತ್ವದ ತಂಡ ಸಿಸಿ ಕ್ಯಾಮೆರಾಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿಯ ಜಾಡು ಹಿಡಿದು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 6 ಲಕ್ಷ ಮೌಲ್ಯದ 62 ಗ್ರಾಂ ತೂಕದ ಚಿನ್ನ ಹಾಗೂ 27 ಸಾವಿರ ಮೌಲ್ಯದ ಬೆಳ್ಳಿ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!