






ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಕೂಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪೂರಕವಾಗಿರುತ್ತವೆ, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿ ಕೊಂಡಾಗ ಮಾತ್ರ ಅವರ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆ ಇದರ ಪ್ರಾಂಶುಪಾಲರಾದ ಡಾಕ. ಅಜಕ್ಕಳ ಗಿರೀಶ್ ಭಟ್ ರವರು ಹೇಳಿದರು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.ಕಾಲೇಜು ಅಭ್ಯರ್ಥಿ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀಯುತ ವಿ.ಕೆ.ಎಂ. ಅಶ್ರಫ್ ರವರು ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಮಂಗಳೂರು ವಿಶ್ವವಿದ್ಯಾನಿಲಯವು 2023 24ನೇ ಸಾಲಿನಲ್ಲಿ ನಡೆಸಿದ ಬಿಎ ಪದವಿ ಪರೀಕ್ಷೆಯಲ್ಲಿ ಒಂಬತ್ತನೇ ರಾಂಕ್ ಗಳಿಸಿದ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಖದೀಜಾ ರಾಸ್ಮಿ ಎನ್. ರವರಿಗೆ ಸನ್ಮಾನವನ್ನು ಮಾಡಲಾಯಿತು.ಇದೇ ಸಂದರ್ಭದಲ್ಲಿ ಕಾಲೇಜು ಆಂತರಿಕ ಗುಣಮಟ್ಟ ಭರವಸಕೋಶದ ಸದಸ್ಯರಾದ ರಮಾನಾಥ ವಿಟ್ಲರವರು ಇತ್ತೀಚೆಗೆ ನಿಧನರಾದ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾಗಿದ್ದ ಹಾಗೂ ಕಾಲೇಜು ಸ್ಥಾಪಕ ಸಮಿತಿಯ ಕಾರ್ಯದರ್ಶಿಯಾಗಿದ್ದ ಶ್ರೀಯುತ ಸಿ. ಎಫ್. ಸಿಕ್ವೇರಾ ರವರನ್ನು ಸ್ಮರಿಸಿ ಮೌನ ಪ್ರಾರ್ಥನೆ ನಡೆಸಿಕೊಟ್ಟರು.ಇದೇ ಸಂದರ್ಭದಲ್ಲಿ ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ತೋರಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ರವರು ಕಾಲೇಜಿನ ವಿವಿಧ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪ್ರಸ್ತಾಪಿಸಿದರು ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿದರು.ಈ ಸಮಾರಂಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸುಜಾತ ಎಂ.ಕೆ., ಆಂತರಿಕ ಗುಣಮಟ್ಟ ಭರವಸಕೋಶದ ಸಂಚಾಲಕರು ಪ್ರೊ. ಮಾಲವಿಕಾ ಕ್ಯಾತರಿನ್ ಬಲ್ಮಿ, ಸಾಂಸ್ಕೃತಿಕ ಸಂಘದ ಸಂಚಾಲಕರಾದ ಡಾ. ಸೌಮ್ಯ ಹೆಚ್. ಹಾಗೂ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು. ಡಾ. ಜ್ಯೋತಿ ಪಿ. ಎಸ್. ಇವರು ಸಭಾ ಕಾರ್ಯಕ್ರಮವನ್ನು ನಿರ್ವಹಿಸಿದರು.








