- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾದ ಎರಡನೆ ಅಲೆ ಕಾಣಿಸಿಕೊಂಡಿರುವುದರ ಕುರಿತು ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಕೊರೋನಾ ಪರಿಸ್ಥಿತಿ ಎದುರಿಸಲು ಮಾಡಲಾದ ಸಿದ್ದತೆ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಈ ಆದೇಶ ನೀಡಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯ ಸರ್ಕಾರಗಳು ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ.

ಡಿಸೆಂಬರ್ ನಲ್ಲಿ ಪರಿಸ್ಥಿತಿ ಗಂಭೀರ ಹಂತ ತಲುಪಲಿದೆ ಎಂಬ ಆತಂಕವನ್ನು ಕೂಡ ನ್ಯಾಯಾಲಯ ವ್ಯಕ್ತಪಡಿಸಿದೆ. ಇದೇ ವೇಳೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಒಡಿಶಾದ ರಾಜ್ಯಪಾಲ ಗಣೇಶಿ ಲಾಲ್ ಅವರ ಪತ್ನಿ ಸುಶೀಲ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ನವೆಂಬರ್ 2ರಂದು ಸುಶೀಲ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು.


- Advertisement -








