Friday, June 27, 2025
spot_imgspot_img
spot_imgspot_img

ಅಬ್ದುಲ್ ರಹಿಮಾನ್ ಹತ್ಯೆ: 15 ಮಂದಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ ಸಮೀಪ ಮುಸ್ಲಿಂ ಯುವಕನನ್ನು ಬರ್ಬರವಾಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಹಿಮಾನ್ ಅವರ ಕೊಲೆ ಮತ್ತು ಕಲಂದ‌ರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್‌ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಅವರು ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯಲ್ಲಿ ಮರಳು ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ ತದ್ವಾ ತಿವಿದು, ಕಡಿದರು, ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಕಲಂ ಬಿ.ಎನ್.ಎಸ್ 103, 109, 118(1), 118(2), 190, 191(1), 191(2), 191(3) ನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!