Sunday, June 29, 2025
spot_imgspot_img
spot_imgspot_img

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್..!

- Advertisement -
- Advertisement -

ಬೆಂಗಳೂರು: ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಅಪ್ರಾಪ್ತೆಯನ್ನು ಕಾರು ಹತ್ತಿಸಿಕೊಂಡು ಡ್ಯಾನ್ಸ್ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಕಾಡುಗೋಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಭಾರತಿ ಕಣ್ಣನ್ (28) ಎಂದು ಗುರುತಿಸಲಾಗಿದೆ.

ಅಪ್ರಾಪ್ತ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆರೋಪಿ ಕಾರು ನಿಲ್ಲಿಸಿ, ತಾನು ಡ್ಯಾನ್ಸ್ ಮಾಸ್ಟರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಜೊತೆಗೆ ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಆಕೆಯನ್ನು ನಂಬಿಸಿ, ಕಾರು ಹತ್ತಿಸಿಕೊಂಡಿದ್ದಾನೆ.

ಒಳಗೆ ಕುಳಿತ ಬಳಿಕ ಕಾರ್ ಲಾಕ್ ಮಾಡಿಕೊಂಡಿದ್ದಾನೆ. ಸ್ವಲ್ಪ ದೂರ ಹೋಗುತ್ತಲೇ ಕಾರು ನಿಲ್ಲಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಆಕೆಯನ್ನು ಹತ್ತಿಸಿಕೊಂಡಿದ್ದ ಸ್ಥಳಕ್ಕೆ ಬಿಟ್ಟು ಹೋಗಿದ್ದಾನೆ.

ಘಟನೆ ಬಗ್ಗೆ ಅಪ್ರಾಪ್ತೆ ತನ್ನ ಪೋಷಕರಿಗೆ ತಿಳಿಸಿದ್ದು, ತಕ್ಷಣ ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!