- Advertisement -
- Advertisement -






ದೇರಳಕಟ್ಟೆ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದು ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ನೌಶಾದ್ ರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ.
ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
- Advertisement -