Tuesday, June 16, 2026
spot_imgspot_img
spot_imgspot_img

ಮೂಲ್ಕಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿಯ ಬಂಧನ..!

- Advertisement -
- Advertisement -

ಮೂಲ್ಕಿ: ಪಕ್ಷಿಕೆರೆ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಯುವಕನೋರ್ವನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಯನ್ನು ಪ್ರೀತಮ್ ಎಂದು ಗುರುತಿಸಲಾಗಿದೆ.

ಮೇ 25, 2025ರಂದು ಆರೋಪಿ ಪ್ರೀತಮ್, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಹಾಸನದ ಉದಯಪುರಕ್ಕೆ ಕರೆದುಕೊಂಡು ಹೋಗಿದ್ದನು. ಬಾಲಕಿಯ ತಾಯಿ, ತನ್ನ ಮಗಳ ಅಪಹರಣದ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಗುರುವಾರ (ಮೇ 29) ಆರೋಪಿಯು ಬಾಲಕಿಯೊಂದಿಗೆ ಮಂಗಳೂರಿಗೆ ವಾಪಸ್ ಬಂದಿರುವ ಮಾಹಿತಿಯನ್ನು ಪಡೆದ ಮೂಲ್ಕಿ ಪೊಲೀಸರು, ತಕ್ಷಣ ಕಾರ್ಯಾಚರಣೆ ನಡೆಸಿ ಪ್ರೀತಮ್‌ನನ್ನು ವಶಕ್ಕೆ ತೆಗೆದುಕೊಂಡರು.

ವಿಚಾರಣೆಯ ಸಂದರ್ಭದಲ್ಲಿ ಬಾಲಕಿಯು ಆರೋಪಿ ಪ್ರೀತಮ್ ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಆಧಾರದ ಮೇಲೆ ಮೂಲ್ಕಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಮಂಜುನಾಥ್ ಅವರು ಆರೋಪಿಯ ವಿರುದ್ಧ ಪೋಕ್ಸ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

- Advertisement -

Related news

error: Content is protected !!