Thursday, July 30, 2026
spot_imgspot_img
spot_imgspot_img

ಪುತ್ತೂರು: ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್‌; ವಿಚಾರಣೆಗೆ ಹಾಜರಾಗಲು ಸೂಚನೆ..!!!

- Advertisement -
- Advertisement -

ಪುತ್ತೂರು: ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲರವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ. 6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಅಲ್ಲದೇ ಈ ವಿಚಾರಣೆಗೆ ಅರುಣ್ ಕುಮಾ‌ರ್ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ.

ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಒಂದು ವೇಳೆ ಅರುಣ್ ಕುಮಾರ್ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದಿದ್ದರೆ ಈ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

- Advertisement -

Related news

error: Content is protected !!