Friday, June 27, 2025
spot_imgspot_img
spot_imgspot_img

ಏಕದಿನ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್​ವೆಲ್

- Advertisement -
- Advertisement -

ಕ್ಯಾನ್ಬೆರ: ಏಕದಿನ ಕ್ರಿಕೆಟ್‌ನಿಂದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಅವರು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.

2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್​ವೆಲ್ ನಿವೃತ್ತಿ ಘೋಷಿಸಿದ್ದಾರೆ. ಆದರೆ ಅವರು ಟಿ20 ಕ್ರಿಕೆಟ್‌ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್ ಬೈಲಿ ಜೊತೆ ಮಾತನಾಡಿದ್ದೇನೆ. ಈ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದ್ದೆವು. ಅವರು 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದು ಭಾವಿಸುತ್ತಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು ಸೂಕ್ತ ಸಮಯ. ಇದೇ ಕಾರಣದಿಂದ ನಿವೃತ್ತಿ ಘೋಷಿಸಿರುವುದಾಗಿ ತಿಳಿಸಿದ್ದಾರೆ.

ಮ್ಯಾಕ್ಸ್​ವೆಲ್ ಆಸ್ಟ್ರೇಲಿಯಾ ಪರ ಈವರೆಗೆ 149 ಏಕದಿನ ಪಂದ್ಯಗಳನ್ನಾಡಿದ್ದಾರೆ. 136 ಇನಿಂಗ್ಸ್​ಗಳಲ್ಲಿ 3149 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 3990 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ದ್ವಿಶತಕ ಹಾಗೂ 1 ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಜೊತೆಗೆ 119 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 4002 ಎಸೆತಗಳಲ್ಲಿ 3644 ರನ್ ನೀಡುವ ಮೂಲಕ ಒಟ್ಟು 77 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಮ್ಯಾಕ್ಸ್​ವೆಲ್ ಆಸ್ಟ್ರೇಲಿಯಾ ಪರ ಏಕದಿನ ಕ್ರಿಕೆಟ್‌ನಲ್ಲಿ 3 ಸಾವಿರ ರನ್ ಹಾಗೂ 50 ಕ್ಕಿಂತ ಹೆಚ್ಚು ವಿಕೆಟ್ ಪಡೆದ ಆಲ್‌ರೌಂಡರ್ ಆಗಿದ್ದಾರೆ.

- Advertisement -

Related news

error: Content is protected !!