- Advertisement -
- Advertisement -






ವಿಟ್ಲ :ಪೆರಾಜೆ – ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೇ 31 ರಂದು 2025-26 ನೇ ಶೈಕ್ಷಣಿಕ ವರ್ಷಕ್ಕೆ ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.

ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ , ಸಂಸ್ಥೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ ಸ್ವಾಗತಿಸಿ, ಈ ಶೈಕ್ಷಣಿಕ ವರ್ಷದ ಸಂಪೂರ್ಣ ಯೋಜನೆಗಳನ್ನು ಪೋಷಕರ ಮುಂದೆ ತೆರೆದಿಟ್ಟರು. ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ವಿದ್ಯಾಸಂಸ್ಥೆಯ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾತನಾಡಿ ರಕ್ಷಕ – ಶಿಕ್ಷಕ ಸಂಘದ ರಚನಾ ಕಾರ್ಯವನ್ನು ನಡೆಸಿಕೊಟ್ಟರು. ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಮೊಹಮ್ಮದ್ ಯಾಸಿರ್, ಸದಸ್ಯರುಗಳಾಗಿ ಮೌನೇಶ್ ವಿಶ್ವಕರ್ಮ, ದಿನಕರ ಪೂಜಾರಿ, ಸಮೀದ ಹಾಗೂ ಶೋಭಾ ಎಂ ಶೆಟ್ಟಿ ಯನ್ನು ಪೋಷಕರು ಸರ್ವಾನುಮತದಿಂದ ಆಯ್ಕೆ ಮಾಡಿದರು.ಈ ಕಾರ್ಯಕ್ರಮವನ್ನು ಸಂಸ್ಥೆಯ ಸಹ ಶಿಕ್ಷಕಿ ಲೀಲಾ ಮಯ್ಯ ನಿರೂಪಿಸಿದರು.
- Advertisement -








