Monday, June 22, 2026
spot_imgspot_img
spot_imgspot_img

ಬೆಂಗಳೂರಿನಲ್ಲಿ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ..!

- Advertisement -
- Advertisement -

ಬೆಂಗಳೂರು: ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ತಡರಾತ್ರಿ 12 ಗಂಟೆ ವೇಳೆಗೆ ನಡೆದಿದೆ.

ಫೈನಲ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿಹಿಡಿದ ಹಿನ್ನೆಲೆ ಸಂಭ್ರಮಾಚರಣೆ ಮಾಡುತ್ತಾ ದುಷ್ಕರ್ಮಿಗಳು ಬಾರ್‌ಗೆ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಯುವಕನ ಕುತ್ತಿಗೆಯ ಭಾಗಕ್ಕೆ ಇರಿದಿದ್ದಾರೆ. ಸ್ಥಳದಲ್ಲಿದ್ದವರ ಪ್ರತಿರೋಧದ ಬಳಿಕ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಅದೃಷ್ಟವಶಾತ್ ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!