Saturday, June 6, 2026
spot_imgspot_img
spot_imgspot_img

ಉಡುಪಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಪ್ರಯಾಣಿಕರು ಅಪಾಯದಿಂದ ಪಾರು..!

- Advertisement -
- Advertisement -

ಉಡುಪಿ: ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರಾವಳಿಯಿಂದ ಉಡುಪಿ ಕಡೆಗೆ ಹೋಗುವ ರಸ್ತೆಯಲ್ಲಿ, ಶಿರಬೀಡು ಬಳಿ ನಡೆದಿದೆ.

ಅಪಘಾತ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಷೇಕ್ ಆಚಾರ್ಯ, ಅಭಿಷೇಕ್ ಹಾಗೂ ಮತ್ತಿಬ್ಬರು ವಾಹನದಲ್ಲಿದ್ದರು ಎಂದು ವರದಿಯಾಗಿದೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!