Thursday, August 6, 2026
spot_imgspot_img
spot_imgspot_img

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ 5 ಮಂದಿಯ ಬಂಧನ

- Advertisement -
- Advertisement -

ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಿಂದ ವಿಶೇಷ ತಂಡಗಳನ್ನು ರಚನೆ ಮಾಡಿದ್ದು, ಈ ಕೆಳಕಂಡ ಪ್ರಕರಣಗಳಲ್ಲಿ ಆರೋಪಿತರನ್ನು ಪತ್ತೆ ಮಾಡಿ ಬಂಧಿಸಲಾಗಿದೆ.

ಉಡುಪಿಯ ಹೆಜಮಾಡಿಯ ಮೊಹಮ್ಮದ್ ಅಸ್ಲಾಂ (23)ಎಂಬಾತನು ಸೌದಿ ಅರೇಬಿಯಾದಿಂದ team_jokerzzz._ಎಂಬ ಇನ್ಸ್ಟಾಗ್ರಾಮ್ ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 88/2025 ಕಲಂ.192, 353 (2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದ ಆರೋಪಿ ಮೊಹಮ್ಮದ್ ಅಸ್ಲಾಂ ಎಂಬಾತನ ವಿರುದ್ಧ LOC ಹೊರಡಿಸಿ ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಸುರತ್ಕಲ್ ನ ಕಾಟಿಪಳ್ಳದ ಇಡ್ಯಾ ಗ್ರಾಮ ನಿವಾಸಿ ಚೇತನ್ (20), ಮತ್ತು ಹಳೆಯಂಗಡಿಯ ನಿತಿನ್ ಅಡಪ (23) ಎಂಬುವವರು ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ನ್ನು ಬಳಸಿಕೊಂಡು team_karna_surathkal ಎಂಬ Instagram ಫೇಜ್ ನ್ನು ತೆರೆದಿದ್ದು, ಈ ಪೇಜ್ ನಲ್ಲಿ ಚೆನ್ನಪ್ಪ / ಮುತ್ತು ಸುರತ್ಕಲ್ ಎಂಬಾತನು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 58/2025 ಕಲಂ. 196(1), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಚೇತನ್ ಮತ್ತು ನಿತಿನ್ ಅಡಪ ಎಂಬವರನ್ನು ಪತ್ತೆ ಮಾಡಿ ಸೆರೆ ಹಿಡಿದಿದ್ದು, ತನಿಖೆ ಮುಂದುವರಿದಿದೆ.

ಅರ್ಕುಳ, ಫರಂಗಿಪೇಟೆಯ ರಿಯಾಝ್ ಇಬ್ರಾಹಿಂ (30) ಎಂಬಾತನು ಸೌದಿ ಅರೇಬಿಯಾದಿಂದ Beary_royal_nawab ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ. 353 (2) ಭಾರತೀಯ ನ್ಯಾಯ ಸಂಹಿತೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 42/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಆರೋಪಿ ವಿರುದ್ಧ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ.

ಕೂಳೂರಿನ ಜಮಾಲ್ ಝಾಕೀರ್ (21) ಎಂಬಾತನು Troll bengare_ro_makka ಎಂಬ Instagram ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ. ಹಳೆಯಂಗಡಿಯ ಕೊಳವೈಲ್ ನಿವಾಸಿ ಗುರು ಪ್ರಸಾದ್ ಎಂಬಾತನು Guru dprasad Haleyangadi 2 Facebook ಖಾತೆಯ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ : 53/2025 196(1), (A),353(2),79,56 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದ್ದು, ಗುರು ಪ್ರಸಾದ್ ಎಂಬಾತನನ್ನು ಬಂಧಿಸಲಾಗಿದೆ.

ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರರಾದ ಶ್ರೀ ಸಿದ್ಧಾರ್ಥ ಗೋಯಲ್ ಐ.ಪಿ.ಎಸ್ (ಕಾ ಮತ್ತು ಸು) ಮತ್ತು ಶ್ರೀ ರವಿಶಂಕರ್ (ಆ ಮತ್ತು ಸಂ) ರವರ ಮಾರ್ಗದರ್ಶನದಲ್ಲಿ, ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿರವರ ವಿಶೇಷ ತಂಡಗಳಿಂದ ಮುಂದುವರೆಸಲಾಗಿದೆ.

- Advertisement -

Related news

error: Content is protected !!