- Advertisement -
- Advertisement -





ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಸರಡಗಿ ಬ್ರಿಡ್ಜ್ನಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಮಹಾದೇವ್ (20) ಎಂದು ಗುರುತಿಸಲಾಗಿದೆ.
ಕಲಬುರಗಿಯಿಂದ ಐದು ಜನ ಸ್ನೇಹಿತರು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯ ಹರಿವಿಗೆ ಸಿಲುಕಿ ನಾಪತ್ತೆಯಾಗಿದ್ದಾನೆ. ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರೆದಿದೆ. ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- Advertisement -