Saturday, June 28, 2025
spot_imgspot_img
spot_imgspot_img

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ..!

- Advertisement -
- Advertisement -

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪರಿಸ್ಥಿತಿ ಮತ್ತೊಮ್ಮೆ ಉದ್ವಿಗ್ನಗೊಂಡಿದೆ. ಮೈಥಿ ಸಮುದಾಯದ ನಾಯಕರನ್ನು ಬಂಧಿಸಿದ ಬಳಿಕ ಅನೇಕ ಪ್ರದೇಶಗಳಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಆಡಳಿತವು ರಾಜ್ಯದ 5 ಜಿಲ್ಲೆಗಳಲ್ಲಿ ಐದು ದಿನಗಳವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್ ಮತ್ತು ಕಕ್ಕಿಂಗ್‌ನಂತಹ ಇತರ ಜಿಲ್ಲೆಗಳಲ್ಲಿಯೂ ಕರ್ಪ್ಯೂ ಜಾರಿ ಮಾಡಲಾಗಿದೆ. ಬಿಷ್ಣುಪುರ ಜಿಲ್ಲೆಯಲ್ಲೂ ಕರ್ಪೂ ವಿಧಿಸಲಾಗಿದೆ.

ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಾಂಬೈ ಟೆಂಗೋಲ್‌ಗೆ ಸೇರಿದವರಾಗಿದ್ದರು. ಇವರು ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದು, ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ಗುಂಪು ಹಿಂದಿನ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಕುಕಿ ಗ್ರಾಮಗಳ ಮೇಲೆ ದಾಳಿ ಮಾಡಿದ ಆರೋಪವನ್ನು ಕೂಡ ಹೊಂದಿದೆ.

‘ಅರಾಂಬ್ಳೆ ಟೆಂಗೋಲೆ ನಾಯಕನ ಬಂಧನದ ನಂತರ ಭಾರಿ ಸಂಖ್ಯೆಯಲ್ಲಿ ಜನ ಸೇರಿ ಪ್ರತಿಭಟನೆ ನಡೆಸಿದರು. ಸುಮಾರು 50 ಸುತ್ತು ಗುಂಡಿನ ಚಕಮಕಿ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಗುಂಡಿನ ದಾಳಿ ಮತ್ತು ಪ್ರತಿಭಟನೆಗಳು ಇಂದು ಬೆಳಿಗ್ಗೆಯವರೆಗೂ ಮುಂದುವರಿದಿದೆ. ಅರಾಂಬ್ಳೆ ಟೆಂಗೋಲ್ ಸದ್ಯ 10 ದಿನಗಳ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ.

ಇಂಫಾಲ ಪಶ್ಚಿಮ, ಇಂಫಾಲ ಪೂರ್ವ, ತೌಬಲ್, ಬಿಷ್ಣುಪುರ ಮತ್ತು ಕಕ್ಕಿಂಗ್ ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸಿಕೊಂಡು, ದ್ವೇಷ ಭಾಷಣ ಮತ್ತು ದ್ವೇಷದ ವಿಡಿಯೊ ಸಂದೇಶಗಳನ್ನು ಪ್ರಸಾರ ಮಾಡಿ ಸಾರ್ವಜನಿಕರನ್ನು ಕೆರಳಿಸುವ ಶಂಕೆ ಇದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹಾಗಾಗಿ ಇಂಫಾಲ ಪೂರ್ವ, ಇಂಫಾಲ ಪಶ್ಚಿಮ, ತೌಬಲ್. ಕಕ್ಕಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಸದ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಯುಕ್ತ ಎನ್. ಅಶೋಕ್ ಕುಮಾರ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಮಣಿಪುರದಲ್ಲಿ ಸುಮಾರು ಎರಡು ವರ್ಷ ನಡೆದ ಹಿಂಸಾಚಾರದಲ್ಲಿ 258 ಜನರು ಪ್ರಾಣ ಕಳೆದುಕೊಂಡಿದ್ದಾರೆ. 5,600ಕ್ಕೂ ಹೆಚ್ಚು ಸರ್ಕಾರಿ ಶಸ್ತ್ರಾಸ್ತ್ರಗಳು ಮತ್ತು 6.5 ಲಕ್ಷ ಸುತ್ತು ಮದ್ದುಗುಂಡುಗಳನ್ನು ಲೂಟಿ ಮಾಡಲಾಗಿದೆ. 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಸಾವಿರಾರು ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

- Advertisement -

Related news

error: Content is protected !!