- Advertisement -
- Advertisement -






ಮಂಗಳೂರು: ಮೇ 1 ರಂದು ಮಂಗಳೂರಿನ ಬಜ್ಪೆ ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕಡಿದು ಹತ್ಯೆ ಮಾಡುತ್ತಾರೆ.
ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಮಂಗಳೂರಿನಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿತ್ತು. ಹತ್ಯೆಯಾದ ಮರುದಿನ ಮಂಗಳೂರು ಬಂದ್ ಮಾಡಲಾಗಿತ್ತು.
ಬಳಿಕ ಹಿಂದೂ ಜಾಗರಣ ವೇದಿಕೆ, ಬಿಜೆಪಿ ನಾಯಕರು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ದಳಕ್ಕೆ (NIA) ಒಪ್ಪಿಸಬೇಕೆಂದು ಆಗ್ರಹಿಸಲಾಗಿತ್ತು. ಇದೀಗ ಕೊನೆಗೂ ಸುಹಾಸ್ ಶೆಟ್ಟಿ ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಿ ಕೇಂದ್ರ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಿದೆ.
- Advertisement -








