Friday, June 5, 2026
spot_imgspot_img
spot_imgspot_img

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ; 10 ಮಂದಿಯ ಬಂಧನ..!

- Advertisement -
- Advertisement -

ಕುಂದಾಪುರದ ಸಿದ್ದಾಪುರ ಗ್ರಾಮದ ಮಂಜುನಾಥ್ ಕಾಂಪ್ಲೆಕ್ಸ್ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಜೂಜಾಟ ಆಟ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಬಂಧಿತರನ್ನು ಸುಬ್ರಹ್ಮಣ್ಯ, ಅಶ್ರಫ್, ಸುನೀಲ್, ಧೀರಜ್, ಶಂಕರ, ಸುಧೀರ್ ಕುಮಾರ್, ಮಧುಕರ, ಮನೋಹರ, ಗಣೇಶ್, ರಾಮ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ 8,810 ರೂ ನಗದು, 10 ಮೊಬೈಲ್ ಫೋನ್, ಜೂಜಾಟ ಆಡಲು ಬಂದಿದ್ದ 3 ಮೋಟಾರು ಸೈಕಲ್ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!