Monday, June 8, 2026
spot_imgspot_img
spot_imgspot_img

ಬೆಳ್ತಂಗಡಿ: ವೇಶ್ಯಾವಾಟಿಕೆ ಚಟುವಟಿಕೆ ಶಂಕೆ ಮೇರೆಗೆ ಲಾಡ್ಜ್‌ಗಳಿಗೆ ಪೊಲೀಸ್‌ ದಾಳಿ; ಓರ್ವ ಯುವತಿಯ ರಕ್ಷಣೆ, ಇಬ್ಬರ ಬಂಧನ..!

- Advertisement -
- Advertisement -

ಬೆಳ್ತಂಗಡಿ: ವೇಶ್ಯಾವಾಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನಸ್ಸ್ಪೆಕ್ಟರ್ ಸುಬ್ಬಾಪುರ್ ಮಠ್‌ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.

ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು. ಲಾಡ್ಜ್‌ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ (49) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಯೋಗಿಶ್ ಆಚಾರ್ಯ (49) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ, ಮ್ಯಾನೇಜರ್ ಸತೀಶ್ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!