Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

- Advertisement -
- Advertisement -

ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು ಮೊಸಳೆ ನೋಡಲು ಹೋದವರನ್ನು ಕಂಡು ಮೊಸಳೆಯು ಬಾಯಗಳಿಸಿ ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ಇಂದು ಸಂಜೆ ನಡೆದಿದೆ.

ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು. ನದಿ ದಡದಲ್ಲಿ ಏನೋ ಮಲಗಿದೆ ಎಂದು ಮಕ್ಕಳು ಸ್ಥಳೀಯ ನಿವಾಸಿಗಳಾದ ಅಝೀಝ್ ಪಿ.ಟಿ. ಹಾಗೂ ಇತರರಲ್ಲಿ ತಿಳಿಸಿದ್ದು, ಅವರು ಅದೇನೆಂದು ನೋಡಲು ಹೋದಾಗ ಮೊಸಳೆಯು ನದಿ ದಡದಲ್ಲಿ ವಿಶ್ರಾಂತಿ ಪಡೆಯುವುದು ಕಂಡು ಬಂತು. ಇವರು ಸ್ವಲ್ಪ ಹತ್ತಿರಕ್ಕೆ ಹೋದಾಗ ಮೊಸಳೆ ಆಕ್ರಮಣಕಾರಿಯಂತೆ ಇವರ ಕಡೆ ನೋಡಿದ್ದು, ಮತ್ತೆ ನದಿ ನೀರಿಗೆ ಇಳಿದು ನಾಷ್ಠೆಯಾಗಿದೆ. ಎರಡು ವರ್ಷಗಳ ಹಿಂದೆ ಪಂಜಳದ ನೇತ್ರಾವತಿ ನದಿಯಲ್ಲಿಯೂ ದೊಡ್ಡ ಮೊಸಳೆಗಳೆರಡು ಪ್ರತ್ಯಕ್ಷವಾಗಿದ್ದವು. ಕಳೆದ ವರ್ಷ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂ ಬಳಿಯೂ ನೇತ್ರಾವತಿ ನದಿ ದಡದಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿತ್ತು. ನಡೆಯಲ್ಲಿ ನದಿಯಲ್ಲಿ ಮೊಸಳೆಯಿರುವುದು ನದಿಗೆ ಮೀನು ಬೇಟೆಗೆಂದು ಹೋಗುವವರಲ್ಲಿ ಆತಂಕ ಸೃಷ್ಟಿಸಿದೆ.

- Advertisement -

Related news

error: Content is protected !!