- Advertisement -
- Advertisement -



ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಪ್ರಾಂಶುಪಾಲ ಪ್ರೊಫೆಸರ್ಪ ದ್ಮನಾಭರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾಲೇಜಿನ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಯಶೋದಾರವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಾಣಾಯಾಮ ತರಬೇತಿಯನ್ನು ನೀಡಿದರು.

ಕಾಲೇಜಿನ ಭೋಧಕ ಹಾಗೂ ಭೋದಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
- Advertisement -