- Advertisement -
- Advertisement -



ಮಂಗಳೂರು: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಶನಿವಾರ ನಿಧನರಾಗಿದ್ದಾರೆ.84 ವಯಸ್ಸಿನ ಕಿನ್ನಿಗೋಳಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ.
ಭಾನುವಾರ ಬೆಳಗ್ಗೆ 10ರಿಂದ 12 ಗಂಟೆ ವರೆಗೆ ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯಕ್ರಿಯೆ ನಡೆಸಲಾಗುವುದು.ಕಿನ್ನಿಗೋಳಿ ಅವರು ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ 55 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದಾರೆ.
- Advertisement -