Sunday, June 29, 2025
spot_imgspot_img
spot_imgspot_img

ಮಂಗಳೂರು: ಸಾಮಾಜಿಕ ಕಾರ್ಯಕರ್ತ ನವೀನ್ ರೈ ಮನವಿಗೆ ಸ್ಪಂದಿಸಿದ ಸರಕಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು..! ಭ್ರಷ್ಟರ ಬೇಟೆ-ವಿ.ಟಿವಿ ವರದಿಯ ಫಲಶ್ರುತಿ

- Advertisement -
- Advertisement -

ದ.ಕ.ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಕೆಲವು ದಿನಗಳ ಹಿಂದೆ ಲೋಕಾಯುಕ್ತ ದಾಳಿಗೊಳಗಾಗಿ 18 ದಿನಗಳ ಕಾಲ ಬಂಧನಕ್ಕೆ ಒಳಗಾಗಿದ್ದ ಕೃಷ್ಣವೇಣಿ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಅಭಿಪ್ರಾಯ ವನ್ನು ಗಣನೆಗೆ ತೆಗೆದುಕೊಂಡ ಸರಕಾರವು ಇದೀಗ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಶಿಸ್ತುಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

‘ಲಂಚ ಪಡೆದ ಆರೋಪದ ಮೇಲೆ 18 ದಿನ ಬಂಧನದಲ್ಲಿದ್ದ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಿದಾಗ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ, ಈ ಬಗ್ಗೆ ಸಾರ್ವಜನಿಕರಿಂದ ಟೀಕೆ ಇದೆ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು ಮುಖ್ಯ ಕಾರ್ಯದರ್ಶಿಗೆ ಶನಿವಾರ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಅಮಾನತು ಆದೇಶ ಹೊರಬಿದ್ದಿದೆ.

ಚಾಲಕನ ಮೂಲಕ ₹50 ಸಾವಿರ ಲಂಚ ಪಡೆದ ಆರೋಪದ ಮೇಲೆ ಕೃಷ್ಣವೇಣಿ ಅವರಿಗೆ ಲೋಕಾಯುಕ್ತ ನ್ಯಾಯಾಲಯ 28ರಂದು ಬಂಧಿಸಿದ್ದರು. ಅವರು ಜಾಮೀನು ಪಡೆದು ಜೂನ್ 18 ರಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು.ಯಾವುದೇ ಅಧಿಕಾರಿ 48 ಗಂಟೆಗಿಂತ ಹೆಚ್ಚು ಸಮಯ ಬಂಧನದಲ್ಲಿದ್ದರು, ಅವರನ್ನು ಅಮಾನತು ಮಾಡಲು ಸರ್ಕಾರ ಕ್ರಮಕೈಗೊಳ್ಳುತ್ತದೆ. ಆದರೆ, ಕೃಷ್ಣವೇಣಿ ಅವರ ವಿಚಾರದಲ್ಲಿ ಈ ನಿಯಮ ಪಾಲನೆ ಆಗಿರಲಿಲ್ಲ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ನವೀನ್ ಕುಮಾರ್ ರೈ ಎಂಬುವರು ವಿವಿಧ ಇಲಾಖೆಗಳಿಗೆ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಲು ಮನವಿ ಮಾಡಿದ್ದರು. ಈ ಬಗ್ಗೆ ವಿ ಟಿವಿಯಲ್ಲಿ ಮೊದಲು ಪ್ರಸಾರವಾಗಿತ್ತು. ತಕ್ಷಣವೇ ಎಚ್ಚೆತ್ತು ಸರಕಾರ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಲು ಆದೇಶಿಸಿದೆ.

ಉಳ್ಳಾಲ ತಾಲ್ಲೂಕು ಇರಾ ಗ್ರಾಮದ ವ್ಯಕ್ತಿಯೊಬ್ಬರು ಮನೆ ನಿರ್ಮಿಸಲು ಉದ್ದೇಶಿಸಿರುವ ಜಾಗದಲ್ಲಿದ್ದ ಕಟ್ಟಡದ ಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ತನ್ನ ಚಾಲಕನ ಮೂಲಕ ₹50 ಸಾವಿರ ಲಂಚ ಪಡೆದ ಆರೋಪದ ಕೃಷ್ಣವೇಣಿ, ಕಚೇರಿ ಪ್ರಥಮ ದರ್ಜೆ ಸಹಾಯಕ ಪ್ರದೀಪ್ ಕುಮಾರ್ ಆರ್. ಹಾಗೂ ಚಾಲಕ ಮಧು ಸಿ. ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

ಲಂಚ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಸಿಬ್ಬಂದಿ ಪ್ರದೀಪ್ ಅವರಿಗೆ ಮೇ 28 ರಂದು ಅಮಾನತುಗೊಳಿಸಲಾಯಿತು. ಚಾಲಕ ಮಧು ಹೊರಗುತ್ತಿಗೆ ನೌಕರನಾಗಿದ್ದರಿಂದ ಅಮಾನತು ಪ್ರಶ್ನೆ ಬರುವುದಿಲ್ಲ. ಕೃಷ್ಣವೇಣಿ ಅವರನ್ನು ಮೇ 28ರಿಂದ ಅನ್ವಯವಾಗುವಂತೆ ಅಮಾನತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.ದಕ್ಷಿಣ ಕನ್ನಡ ಹಿರಿಯ ಭೂ ದೃಷ್ಟಿಯಾಗಿ ಸಂದೀಪ್ ಜಿ.ಯು. ಅವರಿಗೆ ಪ್ರಭಾರ ಹೊಣೆ ವಹಿಸಲಾಗಿದೆ.

- Advertisement -

Related news

error: Content is protected !!