Wednesday, June 24, 2026
spot_imgspot_img
spot_imgspot_img

ವಿಶ್ವ ಯೋಗ ದಿನಾಚರಣೆ ಹಾಗೂ ದಿವಾಕರ ದಾಸ್ ನೇರ್ಲಾಜೆ ಇವರು ನೀಡಿದ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಡ್ಕಿದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮೋಹಿನಿ ಜಯಕರ ಇವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಬೀಡಿನ ಮಜಲು , ಇಡ್ಕಿದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ , ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುದೀರ್ ಕುಮಾರ್ ಶೆಟ್ಟಿ,,SDMC ನಿಕಟಪೂರ್ವ ಅಧ್ಯಕ್ಷರಾದ ಆದ೦ MMS, ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ,SDMC ಉಪಾದ್ಯಕ್ಷರಾದ ಶಶಿಪ್ರಭಾ,SDMC ಸದಸ್ಯರಾದ ಸೌಮ್ಮ, ಯಶೋಧ ಶಾಲಾ ಮುಖ್ಯೋಪಾಧ್ಯಾಯರಾದ ಸರೋಜಾ ಎ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಸಂಜೀವ ನಾಯ್ಕರವರು ಕಾರ್ಯಕ್ರಮ ನಿರ್ವಹಿಸಿದರು. ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಶೆಟ್ಟಿ ಇವರು ಮಾತನಾಡಿ ಯೋಗದ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು.ಮತ್ತು ನೋಟ್ ಪುಸ್ತಕದ ಸದುಪಯೋಗವನ್ನು ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿ , ಉಚಿತವಾಗಿ ಪುಸ್ತಕ ನೀಡಿದ ದಿವಾಕರ ದಾಸ್ ನೇರ್ಲಾಜೆಯವರನ್ನು ಗುಣಗಾನ ಮಾಡಿದರು.ಸುಧೀರ್ ಕುಮಾರ್ ಶೆಟ್ಟಿಯವರು ಮಾತನಾಡಿ ದಿವಾಕರದಾಸ್ ನೇರ್ಲಾಜೆ ಇವರ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಶಿಕ್ಷಕಿಯವರಾದ ಪೂರ್ಣಿಮಾರವರು ವಂದಿಸಿದರು.

- Advertisement -

Related news

error: Content is protected !!