- Advertisement -
- Advertisement -



ಬುಡಕಟ್ಟು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ನಟ ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.
ರೆಟ್ರೋ ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡ ಬುಡಕಟ್ಟು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ನಾಯಕ್ ದೂರು ದಾಖಲಿಸಿದ್ದಾರೆ. ಸೈಬರಾಬಾದ್‌ನ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.
- Advertisement -








