Thursday, September 24, 2026
spot_imgspot_img
spot_imgspot_img

ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ..!

- Advertisement -
- Advertisement -

ಬೆಂಗಳೂರು : ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ನಡೆಸಿದ್ದಾರೆ.

ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್​, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್​ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿಯೂ ಲೋಕಾಯಕ್ತ ದಾಳಿ ನಡೆದಿದೆ.

ಗದಗ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್​ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ಇನ್ಸ್​​​ಪೆಕ್ಟರ್ ಪಾಟೀಲ್ ಅವರ ಗದಗದ ಶಿವಾನಂದ ನಗರದ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಅಲ್ಲದೆ, ಅವರ ಬಾಗಲಕೋಟೆ, ಜಮಖಂಡಿಯಲ್ಲಿರುವ ಮನೆಗಳ ಮೇಲೂ ದಾಳಿ ನಡೆದಿದೆ. ಕೆರೂರಿನಲ್ಲಿರುವ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗಿದೆ.

ಲೋಕಾಯುಕ್ತರು ಸಿಪಿಐ ವಾಹನವನ್ನೂ ಬಿಡದೆ ತಪಾಸಣೆ ಮಾಡಿದ್ದಾರೆ. ಕಾಯುಕ್ತ ಡಿವೈಎಸ್​ಪಿ ಪುಷ್ಪಲತಾ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದೆ.

- Advertisement -

Related news

error: Content is protected !!