Sunday, September 13, 2026
spot_imgspot_img
spot_imgspot_img

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌ – ಸಿಐಡಿಯಿಂದ ಬಿ ರಿಪೋರ್ಟ್‌ ಸಲ್ಲಿಕೆ

- Advertisement -
- Advertisement -

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೆಡಿಎಸ್ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿ.ಐ.ಡಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ.ರಿಪೋರ್ಟ್ ಸಲ್ಲಿಕೆ ಮಾಡಿರುವುದಾಗಿ ವರದಿಯಾಗಿದೆ.

ಸಿಐಡಿ ಅಧಿಕಾರಿಗಳು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ ವಿರುದ್ಧ ಎರಡು ಎಫ್‌ಐಆ‌ರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಈಗ ಬಿ.ರಿಪೋರ್ಟ್ ಸಲ್ಲಿಸಿದೆ.

ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಸಂತ್ರಸ್ತ 22 ಜೂನ್ 2024 ರಂದು ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿ ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಸೂರಜ್ ಅವರನ್ನು ಪೊಲೀಸರು ಬಂಧಿಸಿದ್ದರು.

- Advertisement -

Related news

error: Content is protected !!