Monday, September 28, 2026
spot_imgspot_img
spot_imgspot_img

ಪ್ರಧಾನಿ ನರೇಂದ್ರ ಮೋದಿಗೆ ‘ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

- Advertisement -
- Advertisement -

ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಧರ್ಮ ಚಕ್ರವರ್ತಿ’ ಎಂಬ ಬಿರುದನ್ನು ಪ್ರದಾನ ಮಾಡಲಾಯಿತು.ಈ ಗೌರವವನ್ನು ಸ್ವೀಕರಿಸಿದ ಪ್ರಧಾನಿ ಮೋದಿ, “ನಾನು ಇದಕ್ಕೆ ಸೂಕ್ತನೆಂದು ಭಾವಿಸುವುದಿಲ್ಲ. ಆದರೆ ನಾವು ಸಂತರಿಂದ ಏನೇ ಸ್ವೀಕರಿಸಿದರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ, ನಾನು ಈ ಪ್ರಸಾದವನ್ನು ವಿನಮ್ರವಾಗಿ ಸ್ವೀಕರಿಸಿ ಭಾರತ ಮಾತೆಗೆ ಅರ್ಪಿಸುತ್ತೇನೆ” ಎಂದರು.

“ಪ್ರಧಾನಿ ಮೋದಿ ಅವರು 1987ರ ಜೂನ್ 28 ರಂದು ಆಚಾರ್ಯ ವಿದ್ಯಾನಂದರಿಗೆ ‘ಆಚಾರ್ಯ’ ಎಂಬ ಬಿರುದು ದೊರೆತಿತ್ತು. ಇದು ಕೇವಲ ಗೌರವವಲ್ಲ, ಬದಲಾಗಿ ಜೈನ ಸಂಸ್ಕೃತಿಯನ್ನು ಸಂಯಮ ಮತ್ತು ಕರುಣೆಗೆ ಸಂಪರ್ಕಿಸುವ ಪವಿತ್ರ ಧಾರ” ಎಂದು ಅವರು ಹೇಳಿದರು. ಬಳಿಕ ಪ್ರಧಾನಿ ಮೋದಿ ಆಚಾರ್ಯರಿಗೆ ಗೌರವ ಸಲ್ಲಿಸಿದರು.”ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತಾ ಭಾರತವು ವಿಶ್ವದ ಅತ್ಯಂತ ಹಳೆಯ ಜೀವಂತ ಸಂಸ್ಕೃತಿಯಾಗಿದೆ. ನಮ್ಮ ವಿಚಾರಗಳು, ಆಲೋಚನೆಗಳು ಮತ್ತು ತತ್ವಶಾಸ್ತ್ರವು ಅಮರವಾಗಿರುವುದರಿಂದ ನಾವು ಸಾವಿರಾರು ವರ್ಷಗಳಿಂದ ಅಮರರಾಗಿದ್ದೇವೆ” ಎಂದು ತಿಳಿಸಿದರು.

- Advertisement -

Related news

error: Content is protected !!