Monday, July 27, 2026
spot_imgspot_img
spot_imgspot_img

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಸಾವು, ಹಲವರಿಗೆ ಗಾಯ

- Advertisement -
- Advertisement -

ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿ ನಡೆದಿದೆ.

ರಿಯಾಕ್ಟರ್ ಸ್ಫೋಟಗೊಳ್ಳುತ್ತಿದ್ದಂತೆ, ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಯಿಂದಾಗಿ ಕಾರ್ಮಿಕರ ಮೃತದೇಹಗಳು 100 ಮೀಟರ್ ದೂರಕ್ಕೆ ಹಾರಿಬಿದ್ದಿವೆ. ಈ ವೇಳೆ, ಕೆಲವರು ಕಾರ್ಖಾನೆಯ ಒಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿ, ಸಿಲುಕಿದ್ದವರ ರಕ್ಷಿಸಿದ್ದಾರೆ.ಘಟನಾ ಸ್ಥಳದಿಂದ ಆರು ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ. ಇನ್ನು ಕೆಲ ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ತೆಲಂಗಾಣದ ಸಂಗರೆಡ್ಡಿಯಲ್ಲಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿರುವುದಕ್ಕೆ ದುಃಖವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ೫೦,೦೦೦ ರೂ. ನೀಡಲಾಗುವುದು” ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!