- Advertisement -
- Advertisement -



ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಬಂಟ್ವಾಳದ ಪಂಚಿನಡ್ಕ ಎಂಬಲ್ಲಿ ನಡೆದಿದೆ.
ಬೆಳಗ್ಗಿನ ಜಾವ ಪುಣಚ ಮೂಲದ ವ್ಯಕ್ತಿ ಬಂಟ್ವಾಳ ಮೂಲಕ ಮನೆಗೆ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.
ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಪಲ್ಟಿಯಾಗಿ ಕೆಳಗೆ ಬಿದ್ದಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -