Tuesday, July 1, 2025
spot_imgspot_img
spot_imgspot_img

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

- Advertisement -
- Advertisement -

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ.

ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿದೆ. ಅಲ್ಲದೆ, ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು.

ಆರ್​ಸಿಬಿ ಐಪಿಎಲ್ ಗೆಲುವನ್ನು ಸಂಭ್ರಮಿಸಲು ಜೂನ್ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಹಾಗೂ ನೆಚ್ಚಿನ ಆಟಗಾರರನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ವಿಕಾಸ್​ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು.

ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಜಿ ಹೆಚ್ಚುವರಿ ಕಾಲಾವಕಾಶ ಕೋರಿದ್ದರು. ಅದರಂತೆ ವಿಚಾರಣೆ ಮುಂದೂಡಲಾಗಿತ್ತು.

ಇದೀಗ, ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿರುವುದರಿಂದ, ಮಾಜಿ ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಇತರರ ಅಮಾನತು ಆದೇಶ ಬಗ್ಗೆ ಕುತೂಹಲ ಮೂಡಿದೆ.

- Advertisement -

Related news

error: Content is protected !!