- Advertisement -
- Advertisement -



ಉಡುಪಿ: ಯುವಕನೋರ್ವ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಕಾರ್ಕಳ ತಾಲೂಕು ಇನ್ನಾ ಗ್ರಾಮದ ನಿವಾಸಿ ಸುಜಿತ್ ಎಸ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.
ಸುಜಿತ್ ಎಸ್ ಶೆಟ್ಟಿ ಜೂನ್ 1ರಂದು ಬೆಳಗ್ಗೆ 9:30ರ ಸುಮಾರಿಗೆ ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ ದೃಢಕಾಯ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444ಅನ್ನು ಸಂಪರ್ಕಿಸಬಹುದು ಎಂದು ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.
- Advertisement -