Saturday, July 5, 2025
spot_imgspot_img
spot_imgspot_img

ಧರ್ಮಸ್ಥಳ: ಅನಾಮಧೇಯ ವ್ಯಕ್ತಿಯ ದೂರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಯಾವುದೇ ಕಳೆಬರಹ ನೀಡಿಲ್ಲ– ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಲೆಬರಹದ ಕುರಿತು ವಿಚಾರಿಸಿದ್ದು, ಈ ಬಗ್ಗೆ ಪೊಲೀಸರು ಸ್ಪಷ್ಟನೆಯನ್ನು ನೀಡಿದ್ದಾರೆ.

ಹೇಳಿಕೆಯ ಪ್ರಕಾರ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇವುಗಳನ್ನು ಹೊರತುಪಡಿಸಿ, ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ.

ದೂರುದಾರರ ಪರ ವಕೀಲರು ದೂರು ಸಲ್ಲಿಸುವ ವೇಳೆ ಕಲೆಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!