Sunday, July 6, 2025
spot_imgspot_img
spot_imgspot_img

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹ; 43 ಮಂದಿ ಮೃತ್ಯು, 27 ಬಾಲಕಿಯರು ನಾಪತ್ತೆ..!

- Advertisement -
- Advertisement -

ವಾಷಿಂಗ್ಟನ್: ಟೆಕ್ಸಾಸ್‌ನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದ 15 ಮಕ್ಕಳು ಸೇರಿ, 43 ಮಂದಿ ಮೃತಪಟ್ಟಿದ್ದಾರೆ. ಗ್ವಾಡಾಲುಪೆ ನದಿಯ ಬಳಿ ಆಯೋಜಿಸಿದ್ದ ಬೇಸಿಗೆ ಶಿಬಿರದಿಂದ 27 ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದು, 850ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.

ಮಳೆಯ ತೀವ್ರತೆ ಕಡಿಮೆ ಎಂದು ಅಂದಾಜು ಮಾಡಲಾಗಿತ್ತು. ಆದರೆ ತೀವ್ರ ಮಳೆಯಾಗಿ ಹಠಾತ್ ಪ್ರವಾಹ ಉಂಟಾಗಿದೆ. ಅತೀ ಕಡಿಮೆ ಅವಧಿಯಲ್ಲಿ 15 ಇಂಚುಗಳಷ್ಟು ಮಳೆಯಾಗಿದ್ದು, ನದಿಯ ನೀರು 29 ಅಡಿಗಳಿಗೆ ಏರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಕೆರ್ ಕೌಂಟಿ ಪ್ರದೇಶದಲ್ಲಿ ಪ್ರವಾಹ ಕಡಿಮೆಯಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲಾಗಿದೆ. ಹವಾಮಾನ ಇಲಾಖೆ ಈ ಪ್ರದೇಶದಲ್ಲಿ ವಾರ್ಷಿಕವಾಗಿ ಅರ್ಧದಷ್ಟು ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿತ್ತು. ಇದರಿಂದ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದ ಪರಿಣಾಮ ಈ ಘಟನೆ ನಡೆದಿದೆ.

ಹವಾಮಾನ ಇಲಾಖೆಯಲ್ಲಿ ಇತ್ತೀಚಿಗೆ ಸಿಬ್ಬಂದಿ ಕಡಿತದಿಂದ ನಿಖರ ಹವಾಮಾನ ಮುನ್ಸೂಚನೆ ನೀಡಲು ಸಾಧ್ಯವಾಗದೇ ಇದ್ದಿರಬಹುದು ಎಂದು ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!