Tuesday, July 8, 2025
spot_imgspot_img
spot_imgspot_img

ಪುತ್ತೂರು: ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ

- Advertisement -
- Advertisement -

ಭವ್ಯ ಭವಿಷ್ಯದ ನಾಯಕರನ್ನು ಸೃಷ್ಟಿಸುವ ಕೆಲಸ ಶಾಲೆಯಿಂದಲೇ ಆರಂಭವಾಗಬೇಕಿದೆ: ಜಯಪ್ರಕಾಶ್ ಬದಿನಾರ್

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪದಗ್ರಹಣ ಕಾರ್ಯಕ್ರಮವು ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು.

ಅಕ್ಕರೆ ನ್ಯೂಸ್ ಪುತ್ತೂರು ಇದರ ಸಂಸ್ಥಾಪಕರು, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಜಯಪ್ರಕಾಶ್ ಬದಿನಾರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿ ಭಾರತ ಪ್ರಜಾಪ್ರಭುತ್ವ ದೇಶ, ನಾಯಕತ್ವ ಭಾರತೀಯರ ರಕ್ತದಲ್ಲಿದೆ, ಭವ್ಯ ಭವಿಷ್ಯದ ನಾಯಕರನ್ನು ಸೃಷ್ಟಿಸುವ ಕೆಲಸ ಶಾಲೆಯಿಂದಲೇ ಆರಂಭವಾಗುವುದು ಉತ್ತಮ ಬೆಳವಣಿಗೆ, ಇಲ್ಲಿನ ಮಕ್ಕಳ ಶಿಸ್ತು ಅನುಕರಣೀಯ ಎಂದರು.

ವೇದಿಕೆಯಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರು, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ವಿನಯ ಸುವರ್ಣ ಹಾಗೂ ಮುಖ್ಯ ಶಿಕ್ಷಕಿ ಭಗಿನಿ ಪ್ರಶಾಂತಿ ಬಿ ಎಸ್ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ನೂತನ ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣ ವಚನ ಭೋದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ದಿವ್ಯ, ಪ್ರಮೀಳಾ ಪ್ರೀತಿ, ನಳಿನಾಕ್ಷಿ, ಸಾತ್ವಿಕ ಮತ್ತು ಶಿವಪ್ರಿಯ ವಿವಿಧ ಜವಾಬ್ದಾರಿ ನಿರ್ವಹಿಸಿದರು.

- Advertisement -

Related news

error: Content is protected !!