Tuesday, July 28, 2026
spot_imgspot_img
spot_imgspot_img

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ!!

- Advertisement -
- Advertisement -

ಬೆಂಗಳೂರು(ನ. 28): ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಿನ್ನೆ ಶುಕ್ರವಾರ ರಾತ್ರಿ 7:30ರ ವೇಳೆ ಡಾಲರ್ಸ್ ಕಾಲನಿಯಲ್ಲಿರುವ ನಿವಾಸದ ತಮ್ಮ ಕೊಠಡಿಯಲ್ಲಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಸಮೀಪದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಸಂತೋಷ್ ಅವರ ಆತ್ಮಹತ್ಯೆಯತ್ನಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ. ಅವರು ನಿದ್ರೆ ಮಾತ್ರೆ ಸೇವಿಸಿದ್ದರಿಂದ ಪ್ರಜ್ಞಾಹೀನ ಸ್ಥಿತಿಗೆ ಹೋಗಿದ್ದಿರಿರುವ ಶಂಕೆ ಇದೆ. ಸದಾಶಿವನಗರ ಮತ್ತು ಸಂಜಯನಗರ ಠಾಣೆಗಳ ಪೊಲೀಸರು ರಾಮಯ್ಯ ಆಸ್ಪತ್ರೆ ಬಳಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಕೂಡ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ಅವರ ಪತ್ನಿಗೂ ಧೈರ್ಯ ತುಂಬಿದ್ದಾರೆ.

- Advertisement -

Related news

error: Content is protected !!