Wednesday, July 9, 2025
spot_imgspot_img
spot_imgspot_img

ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಿಎಂ ರಾಜನಾಥ್ ಸಿಂಗ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಡಿ.ಕೆ. ಶಿವಕುಮಾರ್ ಹಾಜರಿದ್ದರು.

- Advertisement -

Related news

error: Content is protected !!