- Advertisement -
- Advertisement -



ವಾಹನ ಪರವಾನಗಿ ಮರಳಿ ನೀಡಲು 50ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.
ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -