Thursday, June 4, 2026
spot_imgspot_img
spot_imgspot_img

ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ; ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ..!

- Advertisement -
- Advertisement -

ಕಾರವಾರ: ರಷ್ಯಾ ಮೂಲದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದು ಇವರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ನಡೆದಿದೆ.

ಮೋಹಿ (40), ಅವರ ಪುಟ್ಟ ಮಕ್ಕಳಾದ ಪ್ರೆಯಾ (06) ಹಾಗೂ ಅಮಾ (4) ರಕ್ಷಣೆಗೊಳಗಾದ ರಷ್ಯಾ ಮೂಲದ ಪ್ರಜೆಗಳು.

ರಷ್ಯಾದಿಂದ ಬಿಸಿನೆಸ್ ವಿಸಾ ದಡಿ ಗೋವಾಕ್ಕೆ ಬಂದಿದ್ದ ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ಇಲ್ಲಿನ ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು. ಅಲ್ಲಿಯೇ ಚಿಕ್ಕ ರುದ್ರನ ಮೂರ್ತಿ ಇಟ್ಟುಕೊಂಡು ಪೂಜಾ ಕಾರ್ಯ ಮಾಡುತ್ತಾ ದಿನ ಕಳೆಯುತಿದ್ದಳು. ಸಿಪಿಐ ಶ್ರೀಧರ್ ನೇತ್ರತ್ವದ ತಂಡ ಈ ಭಾಗದಲ್ಲಿ ಗುಡ್ಡ ಕುಸಿತವಾದ್ದರಿಂದ ಗಸ್ತು ತಿರುಗುವಾಗ ಗುಹೆಯಲ್ಲಿ ಯಾರೋ ವಾಸವಾಗಿರುವುದನ್ನು ಪತ್ತೆ ಮಾಡಿ ವಿದೇಶಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ರಷ್ಯಾದ ಮೋಹಿಗೆ ಆಧ್ಯಾತ್ಮದ ಕಡೆ ಹೆಚ್ಚು ಆಸಕ್ತಿ ಇರುವುದರಿಂದ ಪ್ರಕೃತಿಯಲ್ಲಿ ಇರಬೇಕು ಎಂದು ತನ್ನ ಮಕ್ಕಳೊಂದಿಗೆ ಏಕಾಂಗಿಯಾಗಿ ಗುಹೆ ಸೇರಿದ್ದಳು. ಗುಡ್ಡ ಕುಸಿತವಾಗಿರುವ ರಾಮತೀರ್ಥ ಗುಡ್ಡದ ಗುಹೆಯಲ್ಲಿ ತಮ್ಮ ಪುಟ್ಟ ಮಕ್ಕಳೊಂದಿಗೆ ಕತ್ತಲಲ್ಲೇ ಬದುಕು ಕಳೆಯುತಿದ್ದಳು. ಎಸ್.ಪಿ ಎಂ ನಾರಾಯಣ್ ಸಲಹೆಯಂತೆ ಆಕೆಗೆ ಸ್ಥಳೀಯ ಎನ್‌ಜಿಓ ಮೂಲಕ ಆಪ್ತ ಸಮಾಲೋಚನೆ ನಡೆಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದ್ದು ಆಕೆಯನ್ನು ಆಕೆಯ ದೇಶಕ್ಕೆ ಪುನಃ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ.

- Advertisement -

Related news

error: Content is protected !!